Tuesday, January 27, 2026
24 C
Bengaluru
Google search engine
LIVE
ಮನೆ#Exclusive NewsTop Newsಟ್ರಾಫಿಕ್ ನಿಯಮಗಳ ಕುರಿತು ಪೊಲೀಸರಿಂದ ಜಾಗೃತಿ ಅಭಿಯಾನ

ಟ್ರಾಫಿಕ್ ನಿಯಮಗಳ ಕುರಿತು ಪೊಲೀಸರಿಂದ ಜಾಗೃತಿ ಅಭಿಯಾನ

ಚಿಂತಾಮಣಿ: ನಗರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ವಿಜಿ ರವರ ನೇತೃತ್ವದಲ್ಲಿ ನಗರದ ಬೆಂಗಳೂರು ವೃತ್ತದಲ್ಲಿ ಟ್ರಾಫಿಕ್ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದು

ಈ ವೇಳೆ ವಾಹನ ಸವಾರರು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳ ಕುರಿತು ಅರಿವು ಮೂಡಿಸಿ, ವಾಹನಗಳ ದಾಖಲೆಗಳು, ವಿಮೆ, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರ ಬೇಕೆಂದರು. ಜೊತೆಗೆ ಯಾವುದೇ ರೀತಿಯಲ್ಲೂ ಅತಿವೇಗವಾಗಿ ವಾಹನಗಳನ್ನು ಚಾಲನೆ ಮಾಡಬಾರದು ಎಂದರು. ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಒಂದು ವೇಳೆ ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments