Wednesday, April 30, 2025
24 C
Bengaluru
LIVE
ಮನೆ#Exclusive Newsಸಿಎಂ ಸಿದ್ದರಾಮಯ್ಯ ರಾಜೀನಾಮೆ ಇಲ್ಲ: ಕೆ.ಸಿ. ವೇಣುಗೋಪಾಲ್

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಇಲ್ಲ: ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಿದೆ. ಪ್ರಕರಣ ಸಂಬಂಧ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿರುವ ಪಕ್ಷದ ಕೇಂದ್ರ ನಾಯಕತ್ವ, ಈ ಪ್ರಕರಣವನ್ನು ರಾಜಕೀಯವಾಗಿ ಮತ್ತು ಕಾನೂನು ಮಾರ್ಗದ ಮೂಲಕ ಎದುರಿಸುವುದಾಗಿ ಘೋಷಿಸಿದೆ. ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪಕ್ಷದ ರಾಷ್ಟ್ರೀಯ ಸಂಘಟನಾಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ಮೋದಿ- ಅಮಿಶಾ ಆಡಳಿತದಲ್ಲಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡುತ್ತಿರುವುದು ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಬಗ್ಗೆ ಭಾರೀ ಕಳವಳ ಹುಟ್ಟುವಂತೆ ಮಾಡಿದೆ ಎಂದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments