Top Newsರಾಜಕೀಯಸುದ್ದಿ

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ- ಬಿಜೆಪಿ ಕಾರ್ಯಕರ್ತರು, ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್​​ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್​ನಲ್ಲಿ ತಿರಸ್ಕೃತಗೊಂಡ ಬೆನ್ನಲ್ಲೇ ಅವರ ರಾಜೀನಾಮೆಗೆ ಆಗ್ರಹ ಹೆಚ್ಚಾಗಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು, ಕಾರ್ಯಕರ್ತರು ಬುಧವಾರ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಇರುವ ಕುಮಾರಕೃಪ ಗೆಸ್ಟ್ ಹೌಸ್ ಬಳಿ ಬಿಜೆಪಿ-ಜೆಡಿಎಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಇದೇ ವೇಳೆ ಅಲ್ಲಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

Comments (0)

Your email address will not be published. Required fields are marked *

Back to top button