ಸಿಎಂ ಸಿದ್ಧರಾಮಯ್ಯ ಮುಡಾ ಪ್ರಕರಣ-ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಆದೇಶ ನೀಡಿದೆ. ಹಗರಣ ಸಂಬಂಧ ಆರು ವಾರಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು. ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿದ್ದು, ಮೈಸೂರು ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸುವಂತೆ ನ್ಯಾ.ಸಂತೋಷ್ ಗಜಾನನ ಭಟ್ರಿಂದ ಆದೇಶ ನೀಡಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿ, ಡಿ.24ಕ್ಕೆ ವಿಚಾರಣೆಯನ್ನುನ್ಯಾಯಾಲಯ ಮುಂದೂಡಿ




