#Exclusive NewsTop Newsಜಿಲ್ಲೆಫ್ರೀಡಂ ಟಿವಿ ವಿಶೇಷರಾಜಕೀಯರಾಜ್ಯವಿಶೇಷವೈರಲ್ ನ್ಯೂಸ್ಸುದ್ದಿ

ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ,

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಲಾಯಿತು.ನಂತರ ಕಂಪ್ಲಿ ತಹಶೀಲ್ದಾರ ಎಸ್ ಶಿವರಾಜ್ ಶಿವಪುರ್ ಅವರಿಗೆ ಮನವಿಯನ್ನು ಸಲ್ಲಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಮೂಲಭೂತ ಸೌಲಭ್ಯವನ್ನು ಕಲ್ಪಿಸಿ ಕೂಡಿ.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಅಲ್ಮೆರಾ ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ ಸಿ ಯು ಜಿ ಸಿಮ್ ಮತ್ತು ಡೇಟಾ ಗೂಗಲ್ ಕ್ರೋಮ್ ಬುಕ್ ಲ್ಯಾಪ್ ಟಾಪ್ ಪ್ರಿಂಟರ್ ಹಾಗೂ ಸ್ಕ್ಯಾನರ್ಗಳನ್ನ ಒದಗಿಸಿ ಕೊಡಿ ಇದನ್ನೇ ಯಾವುದೇ ಕೊಡದೆ ಕೆಲಸ ಮಾಡುವ ಎಂದರೆ ಹೇಗೆ ಮಾಡಲು ಸಾಧ್ಯ ಕೂಡಲೆ ಸರ್ಕಾರ ಮನ ಗಂಡು ನಮಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಿ.

 

 

 

ಮೊಬೈಲ್ ತಂತ್ರಾಂಶಗಳ ಕೆಲಸ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ.ಕೆ ಸಿ ಎಸ್ ಆರ್ ನೇಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮಮೊ ಹಾಕದಿರಲು ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜಗಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿ.

ಕರ್ನಾಟಕ ಉಚ್ಚನ್ಯಾಯಾಲಯದ ರಿಟ್ ಪಿಟಿಷನ್ ಸಂಖ್ಯೆ 329/ 23 ರ ಅಂತಿಮ ತೀರ್ಪಿಗೆ ಒಳಪಡಿಸಿ ರಾಜ್ಯದಾದಂತ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರ.ದ. ಸ/ರಾ.ನಿ. ಹುದ್ದೆಗಳಿಗೆ ತಕ್ಷಣವೇ ಪದೊನ್ನತಿ
ನೀಡಲು ಕಂದಾಯ ಸಚಿವರು ಕ್ರಮ ಜರುಗಿಸಬೇಕು.

ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರದ ಅಧೀನದಲ್ಲಿ ಪ್ರಾಮಾಣಿಕ ಕೆಲಸವನ್ನು ನಿರ್ವಹಿಸುತ್ತಿದೆ ಬರಗಾಲ.

ಪ್ರವಾಹ ಬೆಳೆ ಸಮೀಕ್ಷೆ ಹೀಗೆ ಹಲವಾರು ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸಗಳನ್ನು ನಮ್ಮ ಅಧಿಕಾರಿಗಳು ಮಾಡುತ್ತಾರೆ .ಅವರ ಮೇಲೆ ನಿರಂತರ ಹಲ್ಲೆಗಳು ಕೂಡ ನಡಿತಾ ಇದೆ ಇದರ ಬಗ್ಗೆ ಸರ್ಕಾರ ಕೂಡಲೇ ನಮ್ಮ ಗ್ರಾಮ ಆಡಳಿತ ಅಧಿಕಾರಿಗಳಿಗೂ ಭದ್ರತೆ ನೀಡಿ ಮತ್ತು ನಮಗೆ ಸುರಕ್ಷಿತವಾದ ಕಟ್ಟಡಗಳನ್ನ ನಿರ್ಮಿಸಿ ಸಾರ್ವಜನಿಕರ ಕೆಲಸ ಮಾಡಲು ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಹೇಳಿಕೆಗಳನ್ನು ಕರ್ನಾಟಕ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವರು ಕೃಷ್ಣ ಬೈರೇಗೌಡರು ನಮ್ಮ ಮನವಿಯನ್ನ ಪರಿಶೀಲನೆ ಮಾಡಿ ನಮಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕೆಂದು ಕರ್ನಾಟಕ ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಂಪ್ಲಿ ಅಧ್ಯಕ್ಷರಾದ ಮಂಜುನಾಥ್ ಹೇಳಿದರು.

ಈ ಸಂದರ್ಭದಲ್ಲಿ ಕಂಪ್ಲಿ ತಾಲೂಕು ಮಟ್ಟದ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ತಾಲೂಕು ಕಚೇರಿ ಎಲ್ಲಾ ಸಿಬ್ಬಂದಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

 

Comments (0)

Your email address will not be published. Required fields are marked *

Back to top button