Top Newsಫ್ರೀಡಂ ಟಿವಿ ವಿಶೇಷರಾಜ್ಯವಿಶೇಷವೈರಲ್ ನ್ಯೂಸ್

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಒಂದು ವಾರದಿಂದ ಮಳೆ ಸುರಿಯುತ್ತಿದೆ.  ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.

ಬೆಳ್ತಂಗಡಿ, ಉಡುಪಿ, ಉಡುಪಿ, ಪಣಂಬೂರು, ಹೊನ್ನಾವರ, ಕದ್ರಾ, ಕುಮಟಾ, ಬನವಾಸಿ, ಬೆಳಗಾವಿ, ಕುಡತಿನಿ, ಲಿಂಗನಮಕ್ಕಿ, ವಿಜಯನಗರ, ದಾವಣಗೆರೆ, ಹಿರಿಯೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Comments (0)

Your email address will not be published. Required fields are marked *

Back to top button