#Exclusive NewsTop Newsಜಿಲ್ಲೆಫ್ರೀಡಂ ಟಿವಿ ವಿಶೇಷವಿಶೇಷವೈರಲ್ ನ್ಯೂಸ್ಸಿನಿಮಾ

ಇಂದು ದರ್ಶನ್ ಅರ್ಜಿ ವಿಚಾರಣೆ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ಈ ಚಾರ್ಜ್​ಶೀಟ್​ನಲ್ಲಿ ಹಲವು ರೀತಿಯ ಶಾಕಿಂಗ್ ವಿಚಾರ ಇದೆ. ಈ ಪ್ರಕರಣದಲ್ಲಿ ಶರಣಾದ ಮೂವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಈಗ ದರ್ಶನ್ ಕೂಡ ಜಾಮೀನಿನ ನೀರೀಕ್ಷೆಯಲ್ಲಿ ಇದ್ದಾರೆ.

ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿ ಒಂದು ತಿಂಗಳು ಕಳೆದಿದೆ. ಬೆಂಗಳೂರು ಕೇಂದ್ರ ಕಾರಗೃಹದಲ್ಲಿ ದರ್ಶನ್ ಹಾಯಾಗಿ ಇದ್ದರು. ಆದರೆ ಬಳ್ಳಾರಿ ಜೈಲಿನಲ್ಲಿ ಅವರಿಗೆ ಖುಷಿಯಿಂದ ಇರೋಕೆ ಸಾಧ್ಯವಾಗುತ್ತಿಲ್ಲ. ಅವರಿಗೆ ತೀವ್ರ ಬೆನ್ನು ನೋವು ಕಾಡುತ್ತಿದೆ. ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿ ಒಂದು ತಿಂಗಳೇ ಕಳೆದಿದೆ. ಇಂದು ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

7 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಪ್ರಕರಣದ ಎ1 ಪವಿತ್ರಾಗೌಡ, ಎ2 ದರ್ಶನ್, ಲಕ್ಷ್ಮಣ್, ನಾಗರಾಜ್, ವಿನಯ್, ರವಿಶಂಕರ್ ಹಾಗೂ ಪವನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇತ್ತೀಚೆಗಷ್ಟೇ ದರ್ಶನ್​ ಅವರು ಬೇಲ್​ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಗೆ ಬರೋ ಸಾಧ್ಯತೆ ಇದೆ. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದರು. ಹೀಗಾಗಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್​ 27ಕ್ಕೆ ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದರು.

 

Comments (0)

Your email address will not be published. Required fields are marked *

Back to top button