Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಯ ಅಧ್ಯಕ್ಷರಾಗಿ ಎಂ.ಜಿ ಬಾಲಕೃಷ್ಣ ಅಧಿಕಾರ ಸ್ವೀಕಾರ

ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಯ ಅಧ್ಯಕ್ಷರಾಗಿ ಎಂ.ಜಿ ಬಾಲಕೃಷ್ಣ ಅಧಿಕಾರ ಸ್ವೀಕಾರ

ಬೆಂಗಳೂರು ಸೆ 28 : ಶತಮಾನದ ಇತಿಹಾಸ ಹೊಂದಿರುವ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಯ 2024-25 ನೇ ಸಾಲಿನ ಅಧ್ಯಕ್ಷರಾಗಿ ಎಂ. ಜಿ ಬಾಲಕೃಷ್ಣ ಅವರು ಅಧಿಕಾರ ವಹಿಸಿಕೊಂಡಿದ್ದಾರೆ .

ಯಶಸ್ವಿ ಉದ್ಯಮಿಯಾಗಿರುವ ಎಂ.ಜಿ ಬಾಲಕೃಷ್ಣ ಅವರು 1989 ರಿಂದ ಸ್ವಂತ ಉದ್ಯಮ ಸ್ಥಾಪಿಸಿ ಯಶಸ್ವಿನ ಮೆಟ್ಟಿಲುಗಳನ್ನು ಏರಿದ್ದಾರೆ. ಕಳೆದ 13 ವರ್ಷಗಳಿಂದ ಎಫ್‌ಕೆಸಿಸಿಐ ನ ಉಪಾಧ್ಯಕ್ಷರು, ಹಿರಿಯ ಉಪಾಧ್ಯಕ್ಷರು, ವಿವಿಧ ಹುದ್ದೆಗಳು ಹಾಗೂ ಸಮಿತಿಯಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಾ ಬಂದಿರುವ ಅವರಿಗೆ, ರಾಷ್ಟ್ರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಉತ್ತಮ ಸಂಘಟನಾಕಾರರಾಗಿರುವ ಅವರು ಈ ಹುದ್ದೆಯನ್ನು ಅಲಂಕರಿಸಿದ್ದಾರೆ.

ಎಫ್‌ಕೆಸಿಸಿಐ ನಲ್ಲಿ ವಿವಿಧ ಸಮಿತಿಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಉಮಾ ರೆಡ್ಡಿ ಅವರು ಹಿರಿಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ , ಎಫ್‌ಕೆಸಿಸಿಐ ನ ಹಲವಾರು ಸಮಿತಿಗಳ ಅಧ್ಯಕ್ಷರಾಗಿ, ಹಲವಾರು ಕಾರ್ಯಕ್ರಮಗಳ ಆಯೋಜಕರಾಗಿ, ಅದರಲ್ಲೂ ಮಹಿಳಾ ಉದ್ಯಮಿಗಳಿಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದ 25 ವರ್ಷಗಳಿಂದ ಎಫ್‌ಕೆಸಿಸಿಐ ನ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಸಾಯಿರಾಂ ಪ್ರಸಾದ್‌ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ . ಎಪಿಎಂಸಿ ಸಮಿತಿಯ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments