#Exclusive NewsTop Newsಜಿಲ್ಲೆಫ್ರೀಡಂ ಟಿವಿ ವಿಶೇಷಸುದ್ದಿ
ಚಾರ್ಮಾಡಿ ಘಾಟ್ ಬಳಿ ಭೀಕರ ಘಟನೆ

ಕಾರು ಹಾಗೂ ಮೀನಿನ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳದಿಂದ ತೆರಳುತ್ತಿದ್ದ ಕಾರು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಮೀನಿನ ಗಾಡಿಯ ನಡುವೆ ಅಪಘಾತ ಸಂಭವಿಸಿದ್ದು. ಡಿಕ್ಕಿಯ ರಭಸಕ್ಕೆ ಮೀನು ತುಂಬಿದ್ದ ಮಿನಿನ ಗೂಡ್ಸ್ ವಾಹನ ಪಲ್ಟಿಯಾಗಿದೆ. ಕಾರಿನ ಮುಂಭಾಗ ಜಖಂ ಗೊಂಡಿದ್ದು. ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




