Top Newsಸುದ್ದಿ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ ಹಲವರಿಗೆ ಗಾಯ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಬಸ್ಸೊಂದು ಪಲ್ಟಿಯಘಿ ವಿದ್ಯಾರ್ಥಿಗಳು ಸೇರಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಬಸ್ಸಿನಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು ಓಬಳಾಪುರ ತಾಂಡ ವಾಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ, ಕೂಡಲೇ ಅಲ್ಲಿದ್ದ ಸ್ಥಳೀಯರು ಬಸ್ಸಿನಲ್ಲಿದ್ದ ವಿದ್ಯಾರ್ಥೀಗಳನ್ನು ಹಾಗೂ ಇತರ ಪ್ರಯಾಣೀಕರನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button