#Exclusive NewsTop Newsಫ್ರೀಡಂ ಟಿವಿ ವಿಶೇಷವಿಶೇಷವೈರಲ್ ನ್ಯೂಸ್ಸುದ್ದಿ

ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್  4ಕ್ಕೆ  ಮುಂದೂಡಿದ ಕೋರ್ಟ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ  ಆರೋಪಿ ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್  4ಕ್ಕೆ  ಮುಂದೂಡಿದ ಕೋರ್ಟ್. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರು ಬಳ್ಳಾರಿ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಅಕ್ಟೋಬರ್​ 4ರಂದು ಬೇಲ್​ ಅರ್ಜಿ ವಿಚಾರಣೆ ನಡೆಯಲಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್​ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಕೋರಿದ್ದಾರೆ.

Comments (0)

Your email address will not be published. Required fields are marked *

Back to top button