Top Newsಸಿನಿಮಾಸುದ್ದಿ

October 2ಕ್ಕೆ ‘ಆರಾಮ್ ಅರವಿಂದ ಸ್ವಾಮಿ’ ಎರಡನೇ ಸಾಂಗ್ ಬಿಡುಗಡೆಗೆ ಸಿದ್ದತೆ

ನಮ್‌ ಏರಿಯಾಲಿ ಒಂದ್ ದಿನ’, ‘ಪೊಲೀಸ್‌ ಕ್ವಾಟ್ರಸ್‌’, ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿದ್ದಾರೆ ನಟ ಅನೀಶ್ ತೇಜೇಶ್ವರ್. ಇದೀಗ ಆರಾಮ್ ಅರವಿಂದ ಸ್ವಾಮಿ ಸಿನಿಮಾದ ಎರಡನೇ ಹಾಡು ಇದೆ October 2ಕ್ಕೆ ಬಿಡುಗಡೆಗೆ ಸಿದ್ದವಾಗಿದೆ.

ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್​ನಿಂದ ಸದ್ದು ಮಾಡುತ್ತಿರುವ ಮುಂದೆ ಹೇಗೋ ಏನೋ ಎಂಬ ಎರಡನೇ ಹಾಡು ನಿಹಾಲ್ ತೌರ್ ಪೊಣಿಸಿದ್ದು, ಈ ಒಂದು ಮೇಲೋಡಿ ಕೃತಿಗೆ ಪ್ರಮೋದ್ ಮರವಂತೆ ಧ್ವನಿ ಗೂಡಿಸಿದ್ದಾರೆ. ಅರ್ಜುನ್ ಜನ್ಯ ಮ್ಯೂಸಿಕ್ ಹಾಡಿನ ಕಿಕ್ ಏರಿಸಿದೆ. ನಾಯಕನನ್ನು ಅನೀಶ್ ಮೊದಲ ಹಾಡಿನಲ್ಲಿ ಕುಣಿದು ಕುಪ್ಪಳಿಸಿದ್ದು, ಈಗ ಮೂಡಿಬರುವ ಮೇಲೋಡಿಯಲ್ಲಿ ಎಲ್ಲರ ಮನದಲ್ಲಿ ಅಚ್ಚೆಯಂತೆ ಉಳಿಯಲಿದ್ದಾನೆ.

ತನ್ನ ಪ್ರಮೋಷನ್ ಕಂಟೆಂಟ್ ನಿಂದಲೇ ಈಗಾಗಲೇ ಸದ್ದು ಮಾಡುತ್ತಿರುವ ’ಆರಾಮ ಅರವಿಂದ ಸ್ವಾಮಿ’ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ನಮ್ ಗಣಿ ಬಿಕಾಂ ಪಾಸ್, ಗಜಾನನ ಅಂಡ್ ಗ್ಯಾಂಗ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾವಿದು. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ’ಆರಾಮ ಅರವಿಂದ ಸ್ವಾಮಿ’ ಈಗಾಗಲೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದ್ದಾನೆ.

ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ ಚಿತ್ರಕ್ಕಿದೆ.

ಅನೀಶ್ ತೇಜೇಶ್ವರ್ ಗೆ ಜೋಡಿಯಾಗಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ಮಿಲನಾ ನಾಗರಾಜ್ ಬಹಳ ವಿಭಿನ್ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ಎರಡು ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲಯಾಳಿ ಹುಡುಗಿ ಹಾಗೂ ಟೀಚರ್ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button