ಮುಂಬೈ: ಬಾಲಿವುಡ್ (Bollywood) ನಟ ಗೋವಿಂದ (Govinda) ಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ.
ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ (Revolver) ಮಿಸ್‌ಫೈರ್ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು (Mumbai Police) ತಿಳಿಸಿದ್ದಾರೆ. ನಟ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಾಲಿವುಡ್ (Bollywood) ನಟ ಗೋವಿಂದ (Govinda) ಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ.
ಮಾಧ್ಯಮಗಳಿಗೆ ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಪ್ರತಿಕ್ರಿಯಿಸಿದ್ದು, ಪರವಾನಗಿ ಪಡೆದ ರಿವಾಲ್ವರ್ ಅನ್ನು ಕೇಸ್‌ನಲ್ಲಿ ಇಟ್ಟುಕೊಂಡಿದ್ದರು. ಇಂದು ಕೇಸ್‌ನಿಂದ ತಗೆಯುವಾಗ ರಿವಾಲ್ವರ್ ಕೆಳಗೆ ಬಿದ್ದಾಗ ಫೈರ್ ಆಗಿ ಬುಲೆಟ್ ಕಾಲಿಗೆ ತಗುಲಿದೆ. ವೈದ್ಯರು ಬುಲೆಟ್ ಅನ್ನು ತೆಗೆದ್ದು ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.