#Exclusive NewsTop Newsಫ್ರೀಡಂ ಟಿವಿ ವಿಶೇಷರಾಜ್ಯವಿಶೇಷಸುದ್ದಿ

ಉದ್ಯಮಿ ವಿಜಯ್ ಟಾಟಾ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ದೂರು ದಾಖಲು:50 ಕೋಟಿ ರೂ.ಗೆ ಬೆದರಿಕೆ ಆರೋಪ ಕುರಿತು

ಬೆಂಗಳೂರು ; ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ವಿರುದ್ಧ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ  ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಕುಮಾರಸ್ವಾಮಿ ಹಾಗೂ ರಮೇಶ್ ​ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿದೆ. ನಂತರ ಆ ಬಗ್ಗೆ ಹೇಳಿಕೆ ನೀಡಿ, 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ವಿಜಯ್ ಟಾಟಾ ಆರೋಪವೇನು?

ಜೆಡಿಎಸ್ ಮುಖಂಡ ಹಾಗೂ ಮಾಜಿ ವಿಧಾನ ಪರಿಷತ್​ ಸದಸ್ಯ  ರಮೇಶ್ ಗೌಡ ನಮ್ಮ ಮನೆಗೆ ಬಂದಿದ್ದರು. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆ ನಿಲ್ಲುತ್ತಿದ್ದಾರೆ ಎಂದಿದ್ದರು. ಅದೇ ವೇಳೆ, ಹೆಚ್​​ಡಿ ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಚುನಾವಣೆಗಾಗಿ 50 ಕೋಟಿ ರೂಪಾಯಿ ಹಣ ನೀಡುವಂತೆ ನನ್ನನ್ನು ಕೇಳಿದ್ದರು. ನಾನು ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು.

ಹಣ ಕೊಡುವುದಿಲ್ಲ ಎಂದಿದ್ದಕ್ಕೆ, ನಿಮ್ಮ ಪ್ರಾಜೆಕ್ಟ್ ಕಂಪ್ಲೀಟ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ದೇವಸ್ಥಾನ ಕಟ್ಟಲು ರಮೇಶ್ ಗೌಡ ಕೂಡ 5 ಕೋಟಿ ರೂಪಾಯಿ ಕೇಳಿದ್ದರು. ತುಂಬಾ ಕಷ್ಟವಿದೆ ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಅಂದಿದ್ದೆ. 1 ವಾರದಿಂದ ರಮೇಶ್ ಗೌಡ ಕಾಲ್, ಮೆಸೇಜ್ ಮಾಡುತ್ತಿದ್ದರು. 2019ರ ಚುನಾವಣೆಯಲ್ಲೂ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೆವು ಎಂದು ವಿಜಯ್ ಟಾಟ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button