#Exclusive Newsಜಿಲ್ಲೆಫ್ರೀಡಂ ಟಿವಿ ವಿಶೇಷರಾಜಕೀಯವಿಶೇಷವೈರಲ್ ನ್ಯೂಸ್ಸುದ್ದಿ

ರಾಜಕೀಯ ಬೆಳವಣಿಗೆಗಳು ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡಿತಾರೆ: ಡಿಕೆ ಸುರೇಶ್

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು ರಾಜಕೀಯ ಪಕ್ಷಗಳಿಗೆ ಮಾಜಿ ಸಂಸದ ಡಿಕೆ ಸುರೇಶ್ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ದೇಶದಲ್ಲಿ ಎನ್‌ಡಿಎಗೆ ಸರ್ಕಾರ ನಡೆಸಲು ಜನರು ಅವಕಾಶ ಕೊಟ್ಟಿದ್ದಾರೆ. ಅಭಿವೃದ್ಧಿ ಮಾಡುವುದರ ಬದಲಾಗಿ
ಆರೋಪ ಪ್ರತ್ಯಾರೋಪ, ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ. ದಸರಾ ವೇಳೆ ಚಾಮುಂಡೇಶ್ವರಿ ಪೂಜಿಸುವ ಸಂದರ್ಭದಲ್ಲಿ ನೊಂದು ಹೇಳುತ್ತಿದ್ದೇನೆ. ಈ ರೀತಿ ಬೀದಿಯಲ್ಲಿ ಕಿತ್ತಾಟ ಮಾಡೋದು ಸರಿಯೇ ಎಂದು ಆತ್ಮಾವಲೋಕನಾ ಮಾಡಿಕೊಳ್ಳಬೇಕಿದೆ ಎಂದರು.

ಚುನಾವಣೆಗೆ ಇನ್ನೂ 4 ವರ್ಷ ಇದೆ

ಚುನಾವಣೆಗೆ ಇನ್ನೂ 4 ವರ್ಷ ಇದೆ.‌ ಈ ಬೆಳವಣಿಗೆ ರಾಜ್ಯದ ಜನರಿಗೆ ಎಳ್ಳಷ್ಟೂ ಇಷ್ಟವಿಲ್ಲ. ನಾನು ಮೂರು ಪಕ್ಷಗಳಿಗೆ ಎಚ್ಚರಿಕೆಯಾಗಿ ಹೇಳುತ್ತಿದ್ದೇನೆ. ದಿನೇ ದಿನೇ ಇದೇ ವಿಚಾರವನ್ನು ದೊಡ್ಡದು ಮಾಡಬಾರದು ಎಂದರು.ಯಾವುದೇ ರಾಜಕೀಯ ಪಕ್ಷವಿರಲಿ ಇಂತಹ ಸ್ಥಿತಿಗೆ ಇಳಿಯಬಾರದು. ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಕೊಡಲಿದೆ. ಎಲ್ಲರ ಮೇಲೆ ತನಿಖೆಗಳು ನಡೆಯುತ್ತಿವೆ‌ ಆದೇಶಗಳು ಬರುವವರೆಗೆ ಕಾಯಬೇಕು. ಬದಲಾಗಿ ಪ್ರತಿದಿನ ಇದನ್ನೇ ದೊಡ್ಡದು ಮಾಡುವುದು ಸರಿಯಲ್ಲ ಎಂದರು.

ಜಾತಿಗಣತಿ ವರದಿಗೆ ಕಾಂಗ್ರೆಸ್‌ನಲ್ಲೇ ಅಸಮಧಾನ ವಿಚಾರವಾಗಿ ಮಾತನಾಡಿ, ಜಾತಿ ಗಣತಿ ವಿಚಾರದಲ್ಲಿ ಎಚ್ಚರಿಕೆಯ ನಡೆಯನ್ನು ಇಡಬೇಕಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನು ನಾನು ಒತ್ತಾಯ ಮಾಡ್ತೇನೆ. ಕೇಂದ್ರ ಸರ್ಕಾರವೂ ಜಾತಿಗಣತಿ ಮಾಡುತ್ತಿದೆ. ಒಂದು‌ ವರ್ಷದೊಳಗೆ ಆ ವರದಿಯೂ ಬರಲಿದೆ. ಮುಖ್ಯಮಂತ್ರಿಗಳು ಅಲ್ಲಿಯವರೆಗೆ ಕಾಯಬೇಕು ಎಂದು ಡಿಕೆ ಸುರೇಶ್ ಮನವಿ ಮಾಡಿದರು.

ಐದು ವರ್ಷ ಸಿದ್ದರಾಮಯ್ಯನೇ ಸಿಎಂ!

ಸಿದ್ದರಾಮಯ್ಯನರು ನಮ್ಮ ನಾಯಕರು‌. ಐದು ವರ್ಷ ಅವರೇ ಮುಖ್ಯಮಂತ್ರಿಗಳಾಗಿರ್ತಾರೆ. ಯಾರು ಅವರನ್ನು ಅಲಾಡಿಸಲು ಆಗಲ್ಲ.ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರ ಮೇಲಿದೆ. ಅವರು ಎಲ್ಲಾ ಸಮಸ್ಯೆಗಳಿಂದ‌ ಬೇಗ ಹೊರ ಬರ್ತಾರೆ ಎಂದು ಭವಿಷ್ಯ ನುಡಿದರು.

Comments (0)

Your email address will not be published. Required fields are marked *

Back to top button