ಮೈಸೂರಿನ ಸುತ್ತೂರು ಮಠ ಹಾಗೂ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ದೇವಸ್ಥಾನಗಳಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಶುಕ್ರವಾರ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಇದೇ ವೇಳೆ ಮೈಸೂರಿನ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದಿದ್ದಾರೆ.


