ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತಿದೆ. ರವಿವಾರ (ಅ. 6) ರಂದು ಯುವ ದಸರಾ (Yuva Dasara) ಆರಂಭವಾಗಲಿದೆ. ಈ ಬಾರಿಯ ಯುವ ದಸರಾ ಮಹರಾಜ ಕಾಲೇಜು ಮೈದಾನದಿಂದ ನಗರದ ಹೊರವಲಯದ ಉತ್ತನಹಳ್ಳಿ ಬಳಿಯ 100 ಎಕರೆ ಕೃಷಿ ಭೂಮಿಯಲ್ಲಿ ನಡೆಯಲಿದೆ.
ಯುವ ದಸರಾ ಕಾರ್ಯಕ್ರಮ ವಿವರ
- ಅಕ್ಟೋಬರ್ 6ರಂದು ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಮತ್ತು ತಂಡದಿಂದ ಸಂಗೀತ ಮನರಂಜನೆ ಕಾರ್ಯಕ್ರಮ ಆಯೋಜಿಸಲಾಗಿದೆ.
- ಅ. 7ರಂದು ಸಂಗೀತ ನಿರ್ದೇಶಕ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ಮನರಂಜನೆ ಕಾರ್ಯಕ್ರಮ ನಡೆಯಲಿದೆ.
- ಅ. 8ರಂದು ಬಾಲಿಹುಡ್ ಖ್ಯಾತಿಯ ರ್ಯಾಪರ್ ಬಾದ್ ಷಾ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ಇರಲಿದೆ.
- ಅ. 9ರಂದು ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನೆರವೇರಲಿದೆ.
- ಅ. 10 ರಂದು ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡದವರಿಂದ ಸಂಗೀತ ಮನರಂಜನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾಹಿತಿ ನೀಡಿದರು.
ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿವೆ. ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡಾಡುತ್ತವೆ (ಸ್ಥಳೀಯ ವೇಳಾಪಟ್ಟಿಗಳನ್ನು ಪರಿಶೀಲಿಸಿ). ಖಾಸಗಿ ವಾಹನಗಳಿಗೆ ಕಾರ್ಯಕ್ರಮ ನಡೆಯವ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಇದೆ.