#Exclusive NewsTop Newsಫ್ರೀಡಂ ಟಿವಿ ವಿಶೇಷರಾಜಕೀಯಸುದ್ದಿ

ಖಾಲಿ ಇರುವ 34 ಸಾವಿರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಸಿಎಂ!

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಜತೆಗೆ ಖಾಲಿ ಇರುವ 34 ಸಾವಿರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿಗೆ ಸಿಎಂ ತಿಳಿಸಿದರು.ಸೋಮವಾರ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ.

Comments (0)

Your email address will not be published. Required fields are marked *

Back to top button