Thursday, January 29, 2026
24.2 C
Bengaluru
Google search engine
LIVE
ಮನೆ#Exclusive Newsಮತ್ತೆ ದೆಹಲಿಗೆ ತೆರಳಿದ ಸಿ.ಪಿ. ಯೋಗೇಶ್ವರ್

ಮತ್ತೆ ದೆಹಲಿಗೆ ತೆರಳಿದ ಸಿ.ಪಿ. ಯೋಗೇಶ್ವರ್

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣಾ ಟಿಕೆಟ್​ಗಾಗಿ ಕಸರತ್ತು ನಡೆಸುತ್ತಿರುವ ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೀಶ್ವರ್, ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ತೆರಳಿದ್ದು ಟಿಕೆಟ್ ಖಾತರಿ ಸಂಬಂಧ ಮಾತುಕತೆ ನಡೆಸಲಿದ್ದಾರೆ ಎಂಬ ವರದಿ ಇದೆ. ಟಿಕೆಟ್ ವಿಚಾರದಲ್ಲಿನ ಅನಿಶ್ಚಿತತೆ ಹಿನ್ನೆಲೆಯಲ್ಲಿ ಭವಿಷ್ಯದ ರಾಜಕೀಯ ನಿರ್ಧಾರಕ್ಕೂ ಮುನ್ನ ದೆಹಲಿ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ದೆಹಲಿಗೆ ತೆರಳಿದ್ದು, ಅಲ್ಲಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಭೇಟಿ ಮಾಡಲಿದ್ದಾರೆ. ಟಿಕೆಟ್ ವಿಚಾರದ ಕುರಿತು ಮಾತುಕತೆ ನಡೆಸಲಿದ್ದು, ಬಳಿಕ ಬಿಜೆಪಿ ಹೈಕಮಾಂಡ್​ನ ಇತರ ನಾಯಕರ ಭೇಟಿ ಮಾಡಲಿದ್ದಾರೆ.

ಚನ್ನಪಟ್ಟಣದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ ಬೆನ್ನಲ್ಲೇ ದೆಹಲಿಗೆ ತೆರಳಿದ ಯೋಗೀಶ್ವರ್, ಚನ್ನಪಟ್ಟಣ ಟಿಕೆಟ್ ಬಗ್ಗೆ ಖಾತರಿ ಮಾಡಿಕೊಳ್ಳಲಿದ್ದಾರೆ. ಅಕ್ಟೋಬರ್ 10ರಂದು ಕುಮಾರಸ್ವಾಮಿ ಕಾರ್ಯಕರ್ತರ ಸಭೆ ಕರೆದಿರೋ ಹಿನ್ನೆಲೆಯಲ್ಲಿ ಪ್ರಸ್ತುತ ಎಲ್ಲಾ ಬೆಳವಣಿಗೆ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದು ಮಾತುಕತೆ ನಡೆಸಲಿದ್ದಾರೆ.

“ಎನ್‍ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಶೀಘ್ರವೇ ತೆರೆಬೀಳಲಿದೆ. ನನಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಸಿಗುವುದು ಬಹುತೇಕ ಖಚಿತ. ಯೋಗೀಶ್ವರ್, ಒಂದು ವೇಳೆ ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುವೆ. ಈ ವಿಚಾರವಾಗಿ ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ” ಎಂದಿದ್ದರು.

ಮುಂದಿನ ನಿರ್ಧಾರಕ್ಕೂ ಮೊದಲು ಅವರು ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲಿದ್ದು, ಅದಕ್ಕಾಗಿ ದೆಹಲಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments