Top Newsಸುದ್ದಿ

ಸರ್ಕಾರದಿಂದ ಯಾವುದೇ ರೈತಪರ ಯೋಜನೆ : ಸರ್ಕಾರ ವಿರುದ್ಧ ಶಾಸಕ ರಾಜು ಕಾಗೆ ಆಕ್ರೋಶ

ಬೆಳಗಾವಿ: ಕಾಂಗ್ರೆಸ್​ನ ಹಿರಿಯ ಮುಖಂಡ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಮೋದಿ ಬಗ್ಗೆ ಮತನಾಡಿ ಸುದ್ದಿಯಾಗಿದ್ದರು. ಈಗ ಸ್ವಪಕ್ಷದ ಸರ್ಕಾರದ ವಿರುದ್ಧವೇ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ತಾವಂಶಿ ಗ್ರಾಮದಲ್ಲಿ ಮಾತನಾಡಿರುವ ಕಾಗೆ, ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ. ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದರು. ಅಲ್ಲದೇ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರೈತರು ಒಂದು ವರ್ಷ ಬೆಳೆಗಳನ್ನ ಬೆಳೆಯುವುದನ್ನು ಬಿಟ್ರೇ ನೀವೇನು ತಿಂತಿರೀ? ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು. ಆದ್ರೆ ಅದನ್ನ ತಿನ್ನೋಕಾಗುತ್ತಾ? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ . ರೈತರು ಬದುಕಿದ್ರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ. ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆ ಪರಿಸ್ಥಿತಿ ಮುಂದುವರೆದ್ರೆ ವಿಧಾನಸೌಧದಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದ್ದೆ. ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತಿಯಾ, ನಿನ್ನ ಕೆಲಸ ಮಾಡ್ತೇವಿ ಅಂತ ಹೇಳಿದ ಮಂತ್ರಿಗಳಿದ್ದಾರೆ ಎಂದು ಕಿಡಿಕಾರಿದರು.

Comments (0)

Your email address will not be published. Required fields are marked *

Back to top button