#Exclusive NewsTop News

ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್​ ಸವಾಲ್

ವಿಜಯಪುರ ಜಿಲ್ಲೆಯಲ್ಲಿ ಮುಸ್ಲಿಂ ಮುಖಂಡರು ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ನಡುವೆ ಮಾತಿನ ಸಮರ ಆರಂಭವಾಗಿದೆ. ಸಿಡಿ ಬಿಡುಗಡೆ ಮಾಡುತ್ತೇವೆ ಅಂತ ಬಹಿರಂಗ ಎಚ್ಚರಿಕೆ ನೀಡಿದ್ದ ಮುಸ್ಲಿಂ ಮುಖಂಡರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಕಿಡಿ ಕಾರಿದ್ದಾರೆ.

ಸುಮ್ಮನೆ ರಾಜಕಾರಣ ಮಾಡಿಕೊಂಡು ಇರಬೇಕು, ಇಲ್ಲದೇ ಹೋದರೆ ನಿಮ್ಮ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜನಕ ಎಸ್ ಎಸ್ ಖಾದ್ರಿ (SS Khadri) ಮತ್ತು ಮುಸ್ಲಿಂ ಮುಖಂಡರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal) ತಿರುಗೇಟು ನೀಡಿದ್ದಾರೆ.

“ಖಾದ್ರಿ ಎಂಬ ಒಬ್ಬ ವಕ್ಫ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನು, ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ.

ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ. ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಾಮಾಜಿಕ ಮಾಧ್ಯಮ ಎಕ್ಸ್​​ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟರ್​ ಪೋಸ್ಟ್​​
” ಖಾದ್ರಿ” ಎಂಬ ಒಬ್ಬ ವಕ್ಫ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನೊಬ್ಬನು ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ.

ಹಿಂದೆಯೂ ನಾನು ಹೇಳಿದ್ದೆ “ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ” ಎಂದು,…

— Basanagouda R Patil (Yatnal) (@BasanagoudaBJP) October 15, 2024

Comments (0)

Your email address will not be published. Required fields are marked *

Back to top button