#Exclusive NewsTop Newsಜಿಲ್ಲೆಸುದ್ದಿ

ಮುಡಾ: ಲೋಕಾಯುಕ್ತ ವಿರುದ್ಧ ಗೌರ್ನರ್​ಗೆ ದೂರು!

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ತನಿಖೆ ಶುರುವಾಗಿದೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. ಈ ಪ್ರಕರಣ ಒಂದಷ್ಟು ರಾಜಕೀಯ ಬೆಳವಣಿಗೆಗೂ ಕಾರಣವಾಗಿತ್ತು.  ಸಿಎಂ ವಿರುದ್ಧ ತನಿಖೆ ನಡೆಸ ಲೋಕಾಯುಕ್ತ ತನಿಖಾಧಿಕಾರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು ದಾಖಲಾಗಿದೆ.  ಹೌದು, ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ದಾಖಲಾಗಿತ್ತು. ಇದೀಗ ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಸರ್ಕಾರದ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಇದು ಪ್ರಕರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿರೀಕ್ಷೆ ಇದೆ.

Comments (0)

Your email address will not be published. Required fields are marked *

Back to top button