#Exclusive NewsTop Newsಫ್ರೀಡಂ ಟಿವಿ ವಿಶೇಷವಿಶೇಷಸುದ್ದಿ

ತಮಿಳ್ನಾಡಲ್ಲೂ ಭಾರೀ ಮಳೆ ಚಿನ್ನೈ ಅಸ್ತವ್ಯಸ್ತ!

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಕಾರಣ ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡು, ಆಂಧ್ರದ ದಕ್ಷಿಣ ಭಾಗ , ಕೇರಳದಲ್ಲಿ ಹಾಗೂ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳಿಂದ  ಭಾರೀ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಂತೆ, ಅ. 15ರ ಮುಂಜಾನೆಯಿಂದಲೇ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಅತ್ತ, ತಮಿಳುನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಮಳೆಯಿಂದಾಗಿ ಚೆನ್ನೈ ಹಾಗೂ ಅದರ ಸುತ್ತಲಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ರಸ್ತೆಗಳಲ್ಲಿ ನೀರು ನಿಂತು ಟ್ರಾಫಿಕ್ ಗೆ ತೀವ್ರ ಅಡಚಣೆಯಾಗಿದೆ. ರಸ್ತೆಯಲ್ಲಿ ನೀರು ನಿಂತಿದ್ದರಿಂದಾಗಿ ಕೆಲವು ನಗರಗಳಲ್ಲಿ ಅಪಘಾತಗಳಾಗಿವೆ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ರೀತಿಯ ವಾತಾವರಣ ಇರುವುದಾಗಿ ತಿಳಿಸಿರುವ ಹವಾಮಾನ ಇಲಾಖೆ, ಈ ಪ್ರಾಂತ್ಯಗಳಿಗೆ ಆರೇಂಜ್ ಅಲರ್ಟ್ ಘೋಷಿಸಿದೆ. ಇದರ ಪರಿಣಾಮ, ಚೆನ್ನೈ ಹಾಗೂ ಅದರ ಸುತ್ತಲಿನ ಜಿಲ್ಲೆಗಳಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Comments (0)

Your email address will not be published. Required fields are marked *

Back to top button