Top Newsಸಿನಿಮಾಸುದ್ದಿ

ಬಘೀರ’ ಚಿತ್ರದಲ್ಲಿ ‘ರುಧಿರ’ನಾಗಿ ಎಂಟ್ರಿ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರಳಿ

‘ಮದಗಜ’ ನಂತರ ಬಿಡುಗಡೆಯಾಗುತ್ತಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಬಘೀರ’ ಚಿತ್ರದ ಮೊದಲ ಹಾಡು ‘ರುಧಿರ ಧಾರ …’ ಬಿಡುಗಡೆ ಆಗಿದೆ. ಇಂದು ಬೆಳಗ್ಗೆ ಮೊದಲ ಹಾಡನ್ನು ರಿಲೀಸ್‌ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್‌ ತನ್ನ ಅಧಿಕೃತ ಜಾಲತಾಣದಲ್ಲಿ ಹೇಳಿಕೊಂಡಿತ್ತು.

ಶ್ರೀಮುರುಳಿ ನಾಯಕನಾಗಿ ನಟಿಸಿರುವ ಬಘೀರ ಚಿತ್ರದ ಮೊದಲ ಹಾಡು ರುಧಿರ ಧಾರಾ ಉಘೇ ಉಘೇ.. ಮಾರ ಮಾರ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಡಾ.ಸೂರು ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವ ಬಘೀರ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಶ್ರೀಮುರುಳಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್ ನಟಿಸಿದರೆ, ಇನ್ನುಳಿದಂತೆ ಪ್ರಕಾಶ್ ರಾಜ್, ರಂಗಾಯಣ ರಘು,ಅಚ್ಯುತ್ ಕುಮಾರ್, ಗರುಡ ರಾಮ್ ಸೇರಿ ಇನ್ನೂ ಹತ್ತಾರು ಕಲಾವಿದರು ನಟಿಸಿದ್ದಾರೆ. ತಾಂತ್ರಿಕ ಬಳಗದಲ್ಲಿ ಎ.ಜೆ ಶೆಟ್ಟಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ, ಪ್ರಣವ್ ಶ್ರೀ ಪ್ರಸಾದ್ ಸಂಕಲನ, ರವಿ ಸಂತೆಹಕ್ಲುಕಲಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಚೇತನ್ ಡಿಸೋಜ್ ಈ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ.

ಅಕ್ಟೋಬರ್ 31ರ ದೀಪಾವಳಿ ಹಬ್ಬದ ಪ್ರಯುಕ್ತ ಹೊಂಬಾಳೆ ಫಿಲಂಸ್​ನ ವಿಜಯ ಕಿರಗಂದೂರು ನಿರ್ಮಾನ ಮಾಡಿರುವ ಬಘೀರ ಸಿನಿಮಾ  ಬಿಡುಗಡೆ ಆಗಲಿದೆ.

Comments (0)

Your email address will not be published. Required fields are marked *

Back to top button