#Exclusive NewsTop Newsಜಿಲ್ಲೆರಾಜಕೀಯಸುದ್ದಿ

ತಮ್ಮ ಗೋಪಾಲ ಜೋಶಿ ಮೇಲಿನ ಎಫ್​ಐಆರ್​ ಬಗ್ಗೆ ಪ್ರಹ್ಲಾದ್​ ಜೋಶಿ ಸ್ಫೋಟಕ ಹೇಳಿಕೆ!

 ನವದೆಹಲಿ ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್  ವಂಚನೆ ಸಂಬಂಧ ಕುರಿತು ನವ ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡಿ  ಮಾತನಾಡಿದ ಅವರು, ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ನನ್ನ ಸಂಪರ್ಕವಿಲ್ಲ, ಹಾಗೂ ಸಂಬಂಧವಿಲ್ಲ ಎಂದರು. ಗೋಪಾಲ್ ಜೋಶಿ ಮಾತ್ರವಲ್ಲ, ಇತರ ಸಹೋದರರು ಅವರ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರು ಪಯೋಗ ಪಡಿಸಿಕೊಳ್ಳುತ್ತಿದ್ದರೇ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಹ್ಲಾದ್ ಜೋಶಿ ಪುನರುಚ್ಚರಿಸಿದರು. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂ ರಿನ ಸಿಟಿ ಸಿವಿಲ್‌ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದರು. ಇನ್ನು, ಬೆಂಗಳೂರಿನಲ್ಲಿ ದಾಖ ಲಾಗಿರುವ ಎಫ್‌ಐಆರ್‌ನಲ್ಲಿ ವಿಜಯ ಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇ ಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದರು.

Comments (0)

Your email address will not be published. Required fields are marked *

Back to top button