#Exclusive NewsTop Newsವಿಶೇಷಸುದ್ದಿ

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.​​ಎಮ್​. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು, ಅಕ್ಟೋಬರ್​ 19: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.​​ಎಮ್​. ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು  ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಭೇಟಿ ಮಾಡಿ ಎಸ್​ಎಂ ಕೃಷ್ಣ ಅವರ ಆರೋಗ್ಯವನ್ನು ವಿಚಾರಿಸಿದರು.

ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Comments (0)

Your email address will not be published. Required fields are marked *

Back to top button