ಮಂಡ್ಯ: 2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಜನರೇ ಈ ಸರ್ಕಾರವನ್ನು ತೆಗೆಯುತ್ತಾರೆ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಬಯಸಿದರೆ ಮತ್ತೆ ಯಾಕೆ ನಾನು ಸಿಎಂ ಆಗಬಾರದು? ಜನ ಮತ್ತೆ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳುವ ಮೂಲಕ 3ನೇ ಬಾರಿ ಮುಖ್ಯಮಂತ್ರಿಯಾಗುವ ಆಸೆ ಬಿಚ್ಚಿಟ್ಟಿದ್ದಾರೆ.

ಈಗಿನ ಪರಿಸ್ಥಿತಿಯನ್ನು ನೋಡಿದರೆ ಜನರೇ ಸರ್ಕಾರವನ್ನು ತೆಗೆಯುತ್ತಾರೆ. 2028ರವರೆಗೆ ಈ ಸರ್ಕಾರವನ್ನು ಎಳೆಯುವುದೂ ಕಷ್ಟ. ಕಾರಣ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅವರಲ್ಲೇ ಅಸಮಧಾನವಿದ್ದು, ಯಾವಾಗ ಸ್ಫೋಟ ಆಗುತ್ತೆ ಗೊತ್ತಿಲ್ಲ. ಶಾಸಕರು ಹಳ್ಳಿ ಹಳ್ಳಿಗೆ ತೆರಳಿ ಕೆಲಸಗಳನ್ನು ಮಾಡಲೂ ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದರು.

By Veeresh

Leave a Reply

Your email address will not be published. Required fields are marked *

Verified by MonsterInsights