#Exclusive NewsTop Newsವಿಶೇಷಸುದ್ದಿ

ಆರಕ್ಷಕರ ಹಿತ ರಕ್ಷಿಸಲು ನಮ್ಮ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸರು (Police) ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.

ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಅವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲ ಹುತಾತ್ಮರಾಗಿದ್ದಾರೆ ಎಂದರು.

ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

 

Comments (0)

Your email address will not be published. Required fields are marked *

Back to top button