#Exclusive NewsTop Newsವಿಶೇಷಸುದ್ದಿ

ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಕಾನ್‌ಸ್ಟೆಬಲ್‌!

 ಬೆಂಗಳೂರು:ಸರಕಾರದ ಯಾವುದಾದರೂ ಇಲಾಖೆಯಲ್ಲಿ ದ್ವಿತೀಯ ದರ್ಜೆ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆ ಕೊಡಿಸುವುದಾಗಿ ನಂಬಿಸಿ 47 ಲಕ್ಷ ರೂ. ನಗದು ಹಾಗೂ 857 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್‌) ಪಡೆಯ ಹೆಡ್‌ ಕಾನ್‌ಸ್ಟೆಬಲ್‌, ಆತನ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅನ್ನಪೂರ್ಣೇಶ್ವರಿ ನಗರ ನಿವಾಸಿ ಭಾಗ್ಯ ಎಂಬುವರು ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್‌ ಠಾಣೆ ಪೊಲೀಸರು, ಚಾಮರಾಜಪೇಟೆಯ ಸಿಎಆರ್‌ನ ಹೆಡ್‌ಕಾನ್‌ಸ್ಟೆಬಲ್‌ ಎಚ್‌.ಆರ್‌.ಪ್ರಶಾಂತ್‌ ಕುಮಾರ್‌ ಮತ್ತು ಆತನ ಪತ್ನಿ ದೀಪಾ ಹಾಗೂ ಸ್ನೇಹಿತ ಡಿ.ಪ್ರಶಾಂತ್‌ ಅವರ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Comments (0)

Your email address will not be published. Required fields are marked *

Back to top button