#Exclusive NewsTop Newsಉಪ ಚುನಾವಣೆರಾಜಕೀಯಸುದ್ದಿ

ಮೈತ್ರಿ ಅಭ್ಯರ್ಥಿ ಯಾರೇ ಆದ್ರು ಯೋಗಿಗೆ ಜಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚನ್ನಪಟ್ಟಣ: ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವ‌ರ್ ಅವರು ಜಯಗಳಿಸುವುದು ಭರ್ಜರಿ ಖಚಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಯೋಗೇಶ್ವರ್ ಅವರನ್ನು ಗೆಲ್ಲಿಸಿಬೇಕು.

ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವ‌ರ್ ಅಭಿವೃದ್ದಿಪರವಾಗಿ ಇರುವುದರಿಂದಲೇ 5 ಬಾರಿ ಶಾಸಕರಾಗಿ ಆಯ್ಕೆಯಾದರು. ಈಗ ಮಾತೃ ಪಕ್ಷ ಕಾಂಗ್ರೆಸ್ಸಿಗೆ ಮರಳಿದ್ದು, ಅವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೇಶ್ವ‌ರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಲಿದ್ದಾರೆ ಎಂದರು. ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವ‌ರ್ ಅವರು ಇರಬೇಕು. ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತು ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಕುಮಾರಸ್ವಾಮಿ ಶಾಸಕರಾಗಿ, ಸಿಎಂ ಆಗಿದ್ದಾಗಲೂ ಚನ್ನಪಟ್ಟಣದಲ್ಲಿ ಮಾಡಲಾಗದ ಅಭಿವೃದ್ಧಿ ಕೆಲಸಗಳನ್ನು ಮುಂದಿನ ತಿಂಗಳಿನಿಂದ ಶಾಸಕರಾಗಿ ಮುಂದುವರೆಸುತ್ತಾರೆ ಸಿದ್ದರಾಮಯ್ಯ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button