Top Newsಸುದ್ದಿ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮತ್ತೆ ಕೊಡಿ: ಪ್ರಧಾನಿಗೆ ಒಮರ್ ಮನವಿ

ನವದೆಹಲಿ: ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಜತೆಗೆ ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಸ್ ನೀಡ ಬೇಕು ಎಂಬ ಮನವಿಯನ್ನೂ ನೀಡಿದ್ದಾರೆ. ದಿನಗಳ ಹಿಂದೆ ಶ್ರೀನಗರದಲ್ಲಿ ನಡೆದಿದ್ದ ಸಂಪುಟ ಸಭೆಯಲ್ಲಿ ಈ ಬಗ್ಗೆ ಅವಿರೋಧವಾಗಿ ನಿರ್ಣಯ ಕೈಗೊಳ್ಳಲಾಗಿತ್ತು. 30 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ಕಾಶ್ಮೀ ರದಲ್ಲಿನ ಇತ್ತೀಚಿನ ಪರಿಸ್ಥಿತಿಗಳ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ -ಕಾಂಗ್ರೆಸ್ ಮೈತ್ರಿಕೂಟ ಗೆದ್ದು ಅಧಿಕಾರ ವಹಿಸಿದ ಬಳಿಕ ಒಮರ್ ನವದೆಹಲಿಗೆ ಮೊದಲ ಬಾರಿಗೆ ಭೇಟಿ ನೀಡಿದ ಅವರು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗಿದ್ದರು.

Comments (0)

Your email address will not be published. Required fields are marked *

Back to top button