Top Newsಸುದ್ದಿ

ಮತದಾನ ಜಾಗೃತಿಗಾಗಿ ಜಾಥ

ರಾಮನಗರ: ಚನ್ನಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ-2024ರ ಅಂಗವಾಗಿ ಅ.25ರ ಶುಕ್ರವಾರ ಚನ್ನಪ್ಟಣ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಜಾಥಕ್ಕೆ ಚನ್ನಪಟ್ಟಣ ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸಿದ್ದರಾಜಮ್ಮ ಹಾಗೂ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ಭಾಗ್ಯಲಕ್ಷ್ಮಮ್ಮ ಚಾಲನೆ ನೀಡಿದರು.

ಮೊದಲಿಗೆ ಸರ್ಕಾರಿ ಶಾಲೆಯಿಂದ ಜಾಥವನ್ನು ಪ್ರಾರಂಭಿಸಿ ಕೋಡಂಬಳ್ಳಿ ಸರ್ಕಲ್‌ವರೆಗೂ ಜಾಥ ಮುಂದುವರೆದು ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿವಾಗಿ ಮತದಾನ ಮಾಡುವೆ ಎಂಬ ಘೋಷವಾಖ್ಯಾ ಮೊಳಗುವುದರ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಜಾಥ ಕಾರ್ಯಕ್ರಮದಲ್ಲಿ, ತಾಲ್ಲೂಕು ಪಂಚಾಯಿತಿ ಎನ್‌ಆರ್‌ಎಲ್‌ಎಂ ಸಿಬ್ಬಂದಿ ಹರೀಶ್ ಬಾಬು, ಗೌರಮ್ಮ, ತಾಲ್ಲೂಕು ಐಇಸಿ ಸಂಯೋಜಕರಾದ ಭವ್ಯ, ಎನ್‌ಆರ್‌ಎಲ್‌ಎಂ ಸಂಘದ ಮಹಿಳೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಗ್ರಾಮಸ್ಥರು ಭಾಗಿಯಾಗಿದ್ದರು.

Comments (0)

Your email address will not be published. Required fields are marked *

Back to top button