India vs New Zealand Test: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಕಿವೀಸ್ ಪಡೆ ಗೆಲುವು ದಾಖಲಿಸಿದೆ. ಇದೀಗ ಎರಡನೇ ಪಂದ್ಯವನ್ನು ಗೆದ್ದುಕೊಂಡರೆ ಮಾತ್ರ ಟೀಮ್ ಇಂಡಿಯಾಗೆ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಹೀಗಾಗಿ ಭಾರತದ ಪಾಲಿಗೆ ದ್ವಿತೀಯ ಟೆಸ್ಟ್ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಅಂತಿಮ ಘಟ್ಟದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 259 ರನ್ ಕಲೆಹಾಕಿದರೆ, ಭಾರತ ತಂಡವು 156 ರನ್​ಗಳಿಗೆ ಆಲೌಟ್ ಆಗಿತ್ತು. ಇನ್ನು 103 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ 255 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 359 ರನ್​ಗಳ ಬೃಹತ್ ಗುರಿ ಪಡೆದುಕೊಂಡಿದೆ.

ಈ ಗುರಿ ಬೆನ್ನತ್ತಲು ಟೀಮ್ ಇಂಡಿಯಾಗೆ ಎರಡುವರೆ ದಿನದಾಟಗಳಿದ್ದು, ಇದರೊಳಗೆ 359 ರನ್​ಗಳಿಸಿ ಜಯ ಸಾಧಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ ಈವರೆಗೆ ಟೆಸ್ಟ್​ನಲ್ಲಿ 300 ಕ್ಕಿಂತ ಹೆಚ್ಚಿನ ರನ್​ಗಳನ್ನು ಚೇಸ್ ಮಾಡಿ ಗೆದ್ದಿಲ್ಲ. ಅಷ್ಟೇ ಅಲ್ಲದೆ ಭಾರತದಲ್ಲಿ ಟೀಮ್ ಇಂಡಿಯಾ 300+ ರನ್​ಗಳನ್ನು ಚೇಸ್ ಮಾಡಿ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಹೀಗಾಗಿಯೇ ಕಿವೀಸ್ ವಿರುದ್ಧ ಭಾರತ ತಂಡ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗುವುದು ದಿಟ.

Leave a Reply

Your email address will not be published. Required fields are marked *

Verified by MonsterInsights