#Exclusive NewsTop Newsರಾಜಕೀಯರಾಜ್ಯಸುದ್ದಿ

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ !

ಮಾಜಿ ಪ್ರಧಾನಿ ಹೆಚ್.​ಡಿ. ದೇವೇಗೌಡ  ಅವರ ಮನೆಗೆ ಇಂದು   ಉಪ‌ ರಾಷ್ಟ್ರಪತಿ ಜಗದೀಪ್ ಧನಕರ್  ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.​ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೆಚ್.​ಡಿ. ದೇವೇಗೌಡ ಮತ್ತು ಹೆಚ್.​ಡಿ. ಕುಮಾರಸ್ವಾಮಿ ಅವರ ಜೊತೆ ಕೆಲ ಹೊತ್ತು ಮಾತನಾಡಿ, ತೆರಳಿದ್ದಾರೆ.

ಶುಕ್ರವಾರ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಕಾರ್ಯಕ್ರಮ ಬಳಿಕ ಇಬ್ಬರು ನಾಯಕರು ಒಟ್ಟಿಗೆ ಬೆಂಗಳೂರಿಗೆ ಆಗಮಿಸಿದ್ದರು.

Comments (0)

Your email address will not be published. Required fields are marked *

Back to top button