#Exclusive NewsTop Newsಫ್ರೀಡಂ ಟಿವಿ ವಿಶೇಷವಿಶೇಷಸುದ್ದಿ

ಕನ್ನಡ ನಾಮಫಲಕ ಬಗ್ಗೆ ಕೋರ್ಟ್ ಅಭಿಪ್ರಾಯ ಐತಿಹಾಸಿಕ : ಸಚಿವ ಶಿವರಾಜ್​ ತಂಗಡಗಿ

 ಬೆಂಗಳೂರು: ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿರುವವರು ಶೇಕಡ 60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೈಕೋರ್ಟ್ ನೀಡಿರುವ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.  ನಾಮಫಲಕದಲ್ಲಿ ಶೇ.60 ಕನ್ನಡ ಬಳಕೆ ಮಾಡಬೇಕೆಂಬುದನ್ನು ಪ್ರಶ್ನಿಸಿ ಕೆಲ ವಾಣಿಜ್ಯ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಆದರೆ ನ್ಯಾಯಾಲಯ ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ. ಕನ್ನಡ ಭಾಷೆ ನೆಲ, ಜಲ, ಸಂಸ್ಕೃತಿ, ಆಚಾರ- ವಿಚಾರ, ಸಂರಕ್ಷಣೆಯ ವಿಚಾರದಲ್ಲಿ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ತಿಳಿಸಿದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಚಿವ ಶಿವರಾಜ ತಂಗಡಗಿ ಅವರು ಸಾಧಕರಿಗೆ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ ಮಾಡಿದರು. ಮತ್ತು ಪ್ರಾಧಿಕಾರಗಳಿಗೆ ಅನುದಾನ ನೀಡಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ಗಳನ್ನು ನಡೆಸಲು 1 ಕೋಟಿಯವರೆಗೂ ಅನುದಾನ ಒದಗಿಸಲಾಗುತ್ತಿದೆ. ಕರ್ಯಕ್ರಮದ ಕುರಿತು ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಬೇಕಾದ ಅನುದಾನ ನೀಡಲಾಗುತ್ತಿದೆ. ಈ ಮೂಲಕ ಕಲೆ ಮತ್ತು ಕಲಾವಿದರನ್ನು ಸರ್ಕಾರ ಪ್ರೋತ್ಸಾಹಿಸುತ್ತದೆ ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button