#Exclusive NewsTop Newsರಾಜಕೀಯವಿಶೇಷಸುದ್ದಿ
ಮುಡಾ ಮಾಜಿ ಆಯುಕ್ತ ನಟೇಶ್ ED ವಶಕ್ಕೆ !

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ನಟೇಶ್ ಅವರನ್ನು ವಶಕ್ಕೆ ಪಡೆದ ಇಡಿ ತನಿಖಾಧಿಕಾರಿಗಳು ಶಾಂತಿನಗರದಲ್ಲಿರುವ ಕಚೇರಿಗೆ ಕರೆದೊಯ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ನಿನ್ನೆ ಬೆಳಗ್ಗೆ ಮುಡಾ ಮಾಜಿ ಆಯುಕ್ತ ನಟೇಶ್ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳ ತಂಡ 33 ಗಂಟೆಗಳ ಕಾಲ ಸುದೀರ್ಘ ಪರಿಶೀಲನೆ ನಡೆಸಿದ್ದರು. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಡಾ ಮಾಜಿ ಆಯುಕ್ತ ನಟೇಶ್ ಹಾಗೂ ನಂದೀಶ್ ಪಾತ್ರವಿರುವ ಬಗ್ಗೆ ಫ್ರೀಡಂ ಟಿವಿ ದಾಖಲೆ ಸಮೇತ ವಿಸ್ತೃತ ಸುದ್ದಿ ಪ್ರಸಾರ ಮಾಡಿತ್ತು.




