Top Newsಸುದ್ದಿ

ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣದ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಜಾರಿ ಬಿದ್ದಿದ್ದಾರೆ.

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್‌ ಕಾರ್ಯಕರ್ತನ ಬೈಕ್‌ ಏರಿ ಪ್ರಚಾರ ನಡೆಸುತ್ತಿದ್ದರು. ಇಧೆ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್‌ ನೆರವಿಗೆ ಬಂದಿದ್ದು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್‌ ಕುಮಾರಸ್ವಾಮಿ ಪ್ರಚಾರ ಕಾರ್ಯ ಮುಂದುವರಿಸಿದರು.

Comments (0)

Your email address will not be published. Required fields are marked *

Back to top button