#Exclusive NewsTop Newsಸುದ್ದಿ
ಹಾಸನದ ಅದಿ ದೇವತೆ ಹಾಸನಾಂಬೆ ತಾಯಿಯ ದರ್ಶನ ಅಂತ್ಯಗೊಂಡಿದೆ !

ಅಕ್ಟೋಬರ್ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್ 25 ರಿಂದ ನವೆಂಬರ್ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
9 ದಿನಗಳಲ್ಲಿ ದಾಖಲೆಯ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದು, ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದು ಬಂದಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಬೆಳಗ್ಗೆ 11:50ರ ನಂತರ ದೇವಿಯ ವಿಶ್ವರೂಪ ದರ್ಶನ ಬಳಿಕ ಇಂದು ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕ ಸ್ವರೂಪ್, ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಎಸ್ಪಿ ಮೊಹಮ್ಮದ್ ಸುಜಿತಾ ಮತ್ತು ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗುತ್ತದೆ.




