#Exclusive NewsTop Newsಉಪ ಚುನಾವಣೆಸುದ್ದಿ

ಪ್ರಚಾರದ ವೇಳೆ ಬೈಕ್​ನಿಂದ ಕೆಳಗೆ ಬಿದ್ದ ನಿಖಿಲ್ ಕುಮಾರಸ್ವಾಮಿ !

ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಬೈಕ್‌ನಿಂದ ಬಿದ್ದ ಘಟನೆ ಶನಿವಾರ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ಮಾಡುವ ವೇಳೆ, ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ಕೂಡಲೇ ನಿಖಿಲ್‌ ಅವರ ಸಹಾಯಕ್ಕೆ ಬಂದು ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಘಟನೆಯಲ್ಲಿ ನಿಖಿಲ್ ಅವರ ಬಲಗಾಲಿಗೆ ಪೆಟ್ಟಾಗಿದ್ದರೂ, ನಿಖಿಲ್ ಅವರು ಕೆಲಕಾಲ ವಿಶ್ರಾಂತಿ ಪಡೆದು ನಂತರ ಮತ್ತೆ ಪ್ರಚಾರ ಆರಂಭಿಸಿದ್ದಾರೆ.

Comments (0)

Your email address will not be published. Required fields are marked *

Back to top button