#Exclusive NewsTop Newsಸುದ್ದಿ

ನಟ, ನಿರ್ದೇಶಕ ಗುರುಪ್ರಸಾದ್‌ ನೇಣಿಗೆ ಶರಣು !

ಟ, ನಿರ್ದೇಶಕ ಗುರುಪ್ರಸಾದ್‌ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್‌ (52) ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಅವರ ಮೃತದೇಹ ಅಪಾರ್ಟ್‌ಮೆಂಟ್‌ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇನ್ನೂ ನವೆಂಬರ್‌ 2ರಂದು ಗುರುಪ್ರಸಾದ್‌ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್‌ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.

1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್.  2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ 100ನೇ ಚಿತ್ರ.

Comments (0)

Your email address will not be published. Required fields are marked *

Back to top button