ಹುಬ್ಬಳ್ಳಿ: ಮುಡಾ ಹಗರಣದ ತನಿಖೆಯಲ್ಲಿ ಲೋಕಾಯುಕ್ತ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಮ್ಯಾಚ್ ಫಿಕ್ಸಿಂಗ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ನಾಯಕರ ಹೇಳಿಕೆ ನ್ಯಾಯಾಂಗ ಮತ್ತು ಸಾಂವಿಧಾನಿಕ ಹುದ್ದೆಯಾದ ಲೋಕಾಯುಕ್ತಕ್ಕೆ ಮಾಡಿದ ಅವಮಾನವಾಗಿದೆ ಎಂದು ಅಶೋಕ್‌ಗೆ ತಿರುಗೇಟು ನೀಡಿದರು. ಅಶೋಕ್ ಅವರು ನ್ಯಾಯಾಂಗದ ವಿರುದ್ಧ ಈ ರೀತಿ ಮಾತನಾಡಬಾರದಿತ್ತು. ಅವರೇ ಸಾಂವಿಧಾನಿಕ ಸ್ಥಾನವನ್ನು ಹೊಂದಿದ್ದು, ಮತ್ತೊಂದು ಸಾಂವಿಧಾನಿಕ ಹುದ್ದೆಯ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಇದು ಖಂಡನೀಯ. ಅಶೋಕ ವಿರುದ್ಧ ಲೋಕಾಯುಕ್ತ ಕ್ರಮ ಕೈಗೊಳ್ಳಬೇಕು’ ಎಂದು ಶಿವಕುಮಾರ್ ಒತ್ತಾಯಿಸಿದರು.