Saturday, September 13, 2025
23 C
Bengaluru
Google search engine
LIVE
ಮನೆ#Exclusive NewsTop Newsದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಕೃಷಿ ತ್ಯಾಜ್ಯ ಸುಡುವ ರೈತರಿಗೆ ಭಾರಿ ಪ್ರಮಾಣ ವಿಧಿಸಿದ ಕೇಂದ್ರ

ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಕೃಷಿ ತ್ಯಾಜ್ಯ ಸುಡುವ ರೈತರಿಗೆ ಭಾರಿ ಪ್ರಮಾಣ ವಿಧಿಸಿದ ಕೇಂದ್ರ

ನವದೆಹಲಿ: ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ ನಂತರ ಮತ್ತು ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ, ಕೃಷಿ ತ್ಯಾಜ್ಯ ಸುಡುವ ರೈತರಿಗೆ ವಿಧಿಸುವ ದಂಡದ ಪ್ರಮಾಣವನ್ನು ದ್ವಿಗುಣಗೊಳಿಸಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನವೆಂಬರ್ 6 ರಂದು ರಾಷ್ಟ್ರ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆಗಾಗಿ ಅಧಿಸೂಚನೆ ಹೊರಡಿಸಿದ್ದು, ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ರೈತರು 30,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.

ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು ಈಗ 5,000 ರೂ. ದಂಡ ಪಾವತಿಸಬೇಕಾಗುತ್ತದೆ. ಎರಡರಿಂದ ಐದು ಎಕರೆ ಹೊಂದಿರುವವರು 10,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ ಮತ್ತು ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರು ಭತ್ತದ ತ್ಯಾಜ್ಯವನ್ನು ಸುಟ್ಟರೆ 30,000 ರೂ. ಪಾವತಿಸಬೇಕಾಗುತ್ತದೆ.

ಈ ಹಿಂದೆ ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ 2,500 ರೂ., ಎರಡರಿಂದ ಐದು ಎಕರೆ ಹೊಂದಿರುವವರಿಗೆ 5,000 ರೂ. ಮತ್ತು ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು ಹುಲ್ಲು ಸುಟ್ಟರೆ 15,000 ರೂ. ದಂಡ ವಿಧಿಸಲಾಗುತ್ತಿತ್ತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments