Saturday, September 13, 2025
21.6 C
Bengaluru
Google search engine
LIVE
ಮನೆ#Exclusive News300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: VIDEO VIRAL

300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: VIDEO VIRAL

ಬಳ್ಳಾರಿ: ಸಂಡೂರು ಉಪಚುನಾವಣೆ ಅಖಾಡದಲ್ಲಿ ಮತಬೇಟೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಮತಯಾಚನೆ ಮಾಡಿದ್ದರು. ಸಿಎಂ ಭಾಗವಹಿಸಿದ್ದ ಸಮಾವೇಶಕ್ಕೆ ಹಣ ಕೊಟ್ಟು ಮಹಿಳೆಯರನ್ನು ಕರೆಸಿಕೊಂಡಿರುವ ಆರೋಪ ಇದೀಗ ಕೇಳಿಬಂದಿದೆ. ಟೋಕನ್ ಕೊಟ್ಟು ಸಿಎಂ ಸಮಾವೇಶಕ್ಕೆ ಜನರನ್ನು ಕರೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

 

300 ರೂ. ಕೊಡುವುದಾಗಿ ಮಹಿಳೆಯರಿಗೆ ಆಮಿಷವೊಡ್ಡಲಾಗಿತ್ತು ಎನ್ನಲಾಗಿದೆ. ಟೋಕನ್ ಸಮೇತ ಮಹಿಳೆಯರು ಮಾತನಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಕಾಂಗ್ರೆಸ್​​ನವರು 300 ರೂ. ಕೊಡುವುದಾಗಿ ಹೇಳಿದ್ದರು ಎಂದು ಕೆಲವು ಮಹಿಳೆಯರು ಹೇಳುತ್ತಿರುವುದು ವಿಡಿಯೋದಲ್ಲಿದೆ.

 

ಬಳ್ಳಾರಿಯ ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುರುವಾರ ಅಬ್ಬರದ ಪ್ರಚಾರ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ, ಸಿಎಂಗೆ ಕಾಣಿಕೆ ಕೊಡುವುದಕ್ಕೆ ಅಭಿಮಾನಿಗಳು ಕುರಿ ತಂದಿದ್ದು ವಿಶೇಷವಾಗಿತ್ತು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments