Top Newsಸುದ್ದಿ

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಹಲವೆಡೆ ತುಂತುರು ಮಳೆ..

ಬೆಂಗಳೂರಿನಲ್ಲಿ  ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಸಾದಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದ್ದಾರೆ.ಗುರುವಾರ ಬೆಳಗಿನ ಜಾವದಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ನಗರದ ಹಲವೆಡೆ ತುಂತುರು ಮಳೆಯಾಗಿದೆ. ಕಾರ್ಪೋರೇಷನ್, ವಿಧಾನಸೌಧ, ಟೌನ್ ಹಾಲ್ ಸೇರಿದಂತೆ  ಹಲವೆಡೆ ತುಂತುರು ಮಳೆ ಬಂದಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಚ್​ಎಎಲ್​ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ  ಇಲಾಖೆ ಮುನ್ಸೂಚನೆ ನೀಡಿದ್ದಾರೆ.

ಕಳೆದ ತಿಂಗಳು ಬೆಂಗಳೂರಲ್ಲಿ ಬರೋಬ್ಬರಿ 60 ಮಿಮೀ ಮಳೆಯಾಗಿತ್ತು. ಈ ತಿಂಗಳ ಕೊನೆಗೆ ದಾಖಲಿಕ ಮಳೆ ಆಗುವ ಸಾಧ್ಯತೆ ಇದೆ. ಒಂದು ವಾರದಿಂದ ಮಳೆ ಆಗಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಈಗ ಚಂಡಮಾರುತ ಪರಿಚಲನೆಯಿಂದಾಗಿ ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವುದು ಖಚಿತವಾಗಿದೆ.

Comments (0)

Your email address will not be published. Required fields are marked *

Back to top button