ಬೆಂಗಳೂರು: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಸಿ.ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಸಿ.ಶಿಖಾ ಬಿಎಂಟಿಸಿ ಎಂಡಿ, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

2004ನೇ ಬ್ಯಾಚ್​​ ಕರ್ನಾಟಕ ಕೇಡರ್​​ನ ಐಎಎಸ್ ಅಧಿಕಾರಿ ಸಿ.ಶಿಖಾ ಅವರು ಸದ್ಯ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದ್ದು, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ ಜಂಟಿ ಕಾರ್ಯದರ್ಶಿಯಾಗಿ ಮಾಡಲಾಗಿದೆ.

ಸಿ.ಶಿಖಾ ಅವರು ಕೆಲವೇ ದಿನಗಳಲ್ಲಿ ಕೇಂದ್ರ ಆಹಾರ ಮತ್ತು ನಾಗರಕ ಸರಬರಾಜು ಸಚಿವಾಲ ಜಂಟಿ ಕಾರ್ಯದರ್ಶಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಸಿ.ಶಿಖಾ ಅವರ ಪತಿ ಅಜಯ್ ನಾಗಗಭೂಷಣ್ ಸಹ ಐಎಎಸ್ ಅಧಿಕಾರಿ

ಸಿ.ಶಿಖಾ ಮೈಸೂರು ಜಿಲ್ಲಾಧಿಕಾರಿಯಾಗಿ ಸೆಸ್ಕಾ ಮತ್ತು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಜರಾಗಿ, ಪಿಯು ಬೋರ್ಡ್ ನಿರ್ದೇಶಕರಾಗಿ, ಬಿಎಂಟಿಸಿ ಎಂಡಿಯಾಗಿ ಕಾರ್ಯ ನಿರ್ವಹಣ ಮಾಡಿದ್ದಾರೆ. ಸದ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹಲವು ಪ್ರಶಿಸ್ತಿಗಳನ್ನು ಪಡೆದಿದ್ದಾರೆ: ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಸಿ.ಶಿಖಾ ಅವರು ಪಡೆದಿದ್ದಾರೆ.

By Veeresh

Leave a Reply

Your email address will not be published. Required fields are marked *

Verified by MonsterInsights