ಬೆಂಗಳೂರು: ರಾಜ್ಯ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಯುತ್ತಿದೆ. 50 ಶಾಸಕರಿಗೆ ತಲಾ 50 ಕೋಟಿ ಆಫರ್ ಬಿಜೆಪಿ ನೀಡಲಾಗ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸತ್ಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಆಪರೇಷನ್ ಕಮಲ ವಿಚಾರವಾಗಿ ಸಿದ್ದರಾಮಯ್ಯ ಮಾಡಿರುವ ಆರೋಪ ಸತ್ಯನೇ ಆಗಿದೆ ಎಂದ್ರು. ನೇರವಾಗಿ ಹಾಗೂ ಪರೋಕ್ಷವಾಗಿ 18 ತಿಂಗಳಿನಿಂದ ಇಂತಹ ಪ್ರಯತ್ನ ಮಾಡ್ತಾರೆ ಇದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಎಲ್ಲವೂ ಸಾಧ್ಯ. ಸರ್ಕಾರ ಅಸ್ಥಿರ ಗೊಳಿಸುವುದೇ ಅವರ‌ ಕೆಲಸವಾಗಿದೆ. ಇದರ ಬಗ್ಗೆ ಖಚಿತ ಮಾಹಿತಿ ಇದೆ. ಅವರು ಪ್ರಯತ್ನ ಮಾಡ್ತಾನೇ ಇದ್ದಾರೆ ಎಂದು ಆರೋಪಿಸಿದರು.

ಸಂಡೂರು ಬೈ ಎಲೆಕ್ಷನ್ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿ, ಚುನಾವಣೆ ಚೆನ್ನಾಗಿ ಆಗಿದೆ. ಜನ ಕಾಂಗ್ರೆಸ್ ಪಕ್ಷಕ್ಕೆ ಆರ್ಶೀವಾದ ಮಾಡ್ತಾರೆ ಎಂಬ ಭರವಸೆ ಇದೆ ಎಂದರು.

ಇನ್ನು ಇದೇ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರ ಗೊಳಿಸುವ ಪ್ರಯತ್ನ ನಡೆಯುತ್ತಿರುವುದು ಸತ್ಯ. ಆದರೆ ಅದಕ್ಕೆ ಎಷ್ಟು ಹಣ ಆಮಿಷ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ ಹಿಂದೆಯೂ ನಡೆದಿತ್ತು, ಸರ್ಕಾರ ಇರುವವರೆಗೂ ನಡೆಯಲಿದೆ ಎಂದರು.

ಸಿಎಂ ಮಾತು ಸತ್ಯ ಎಂದ ಕೆ ಎನ್ ರಾಜಣ್ಣ

ಬಿಜೆಪಿ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ನೀಡಿದ್ದಾರೆಂಬ ಸಿಎಂ ಹೇಳಿಕೆ ವಿಚಾರ ಸತ್ಯ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹೇಳಿದರು.

ಸಿಎಂ ಸತ್ಯವಾದ ಅಂಶನೇ ಹೇಳಿದ್ದಾರೆ. ವಾಮ ಮಾರ್ಗದ ಮೂಲಕ ಸರ್ಕಾರ ಕೆಡವುವ ಕೆಲಸ ಮಾಡ್ತಾರೆ. 136 ಶಾಸಕರಿರೋ ಸರ್ಕಾರವನ್ನ ಬೀಳಿಸುವ ನಡೆ ಸಂವಿಧಾನಕ್ಕೆ ಮಾಡುವ ಅಪಮಾನ ಎಂದು ಕಿಡಿಕಾರಿದರು.

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಹೇಳಿಕೆ ವಿಚಾರವಾಗಿ ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ರಾಜಣ್ಣ, ಅದು ಅವರವರ ವೈಯಕ್ತಿಕ ವಿಚಾರ. ಸಿದ್ದರಾಮಯ್ಯ ಸರ್ಕಾರ ಪತನ ಆಗುತ್ತೆ ಅಂತ ದೇವೇಗೌಡರು ಹೇಳ್ತಾರೆ ಅವರನ್ನ ಪ್ರಶ್ನೆ ಯಾಕೆ ಮಾಡಲ್ಲ ಎಂದು ಮರು ಪ್ರಶ್ನಿಸಿದರು.

By Veeresh

Leave a Reply

Your email address will not be published. Required fields are marked *

Verified by MonsterInsights