Tuesday, January 27, 2026
20.2 C
Bengaluru
Google search engine
LIVE
ಮನೆ#Exclusive NewsTop Newsವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ

ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ

ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಲಾಗಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಕೃತ್ಯದ ವಿಡಿಯೋ ಮೊಬೈಲ್​ ಫೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದ್ದು, ಸದ್ಯ ಮಾಳಮಾರುತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯ ವಡ್ಡರವಾಡಿಯ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಜತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಅಲ್ಲೇ ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ಹಲ್ಲೆ ಮಾಡಿದ್ದಾರೆ. ಸಂಬಂಧ ಇಲ್ಲದವರೆಲ್ಲಾ ಆ ಮಹಿಳೆಯರ ಮನೆಗೆ ಬಂದು ಹೋಗುತ್ತಾರೆ. ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನೆರೆ ಮನೆಯವರು ತಾಯಿ-ಮಗಳನ್ನ ಮನೆ ಬಿಡಿಸಲು ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಲಾಗಿದೆ.

ಹಲ್ಲೆಗೊಳಗಾದ ಬಳಿಕ ಮಹಿಳೆಯು ದೂರು ನೀಡಲು  ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, 2 ದಿನ ಪೊಲೀಸ್ ಠಾಣೆಗೆ ಅಲೆದರೂ ದೂರು ಸ್ವೀಕರಿಸಲು ನಿರಾಕರಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಮಹಿಳೆ, ‘ಜೀವ ಭಯ ಇದೆ, ರಕ್ಷಣೆ ಕೊಡಿ’ ಎಂದು ಮನವಿ ಬೆಳಗಾವಿ ಕಮಿಷನರ್​ಗೆ ದೂರು ನೀಡಿದ್ದರು. ನಂತರ ಇದೀಗ ಕಮಿಷನರ್​ ಸೂಚನೆ ಮೇರೆಗೆ ಶುಕ್ರವಾರ ರಾತ್ರಿ ಮೂವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments