Top Newsರಾಜ್ಯಸುದ್ದಿ

ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು:ನೈಋತ್ಯ ರೈಲ್ವೆ ವೇಳಾಪಟ್ಟಿ

ಹುಬ್ಬಳ್ಳಿ: ಶಬರಿಮಲೆ  ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ  ಕರ್ನಾಟಕದಿಂದ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದೆ.

ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.
  1. ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.
  2. ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.

2 ಎಸಿ ಟು ಐಉರ್​, 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

 ಇನ್ಮುಂದೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು ವಿಶೇಷ ರೈಲುದೆ ಸಂಚರಲಿಸಲಿ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.

  1. ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ.
  2. ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ರೈಲು ಎಸಿ ಟು
  3. ಟೈಯರ್​​, ಎಸಿ ತ್ರೀ ಟೈಯರ್​​, ಸ್ಲೀಪರ್​​ ಕ್ಲಾಸ್​, ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು ಎಸ್​ಎಲ್​ಆರ್​ಡಿ ಬೋಗಿಗಳನ್ನು ಹೊಂದಿದೆ.

 

  1. ಎಲ್ಲೆಲ್ಲಿ ನಿಲುಗಡೆ?

  1. ಎಸ್​ಎಸ್​ಎಸ್​ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್​ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್​, ತಿರುಪ್ಪೂರು, ಪೋದನೂರು, ಪಾಲಕ್ಕಾಡ್​, ತ್ರಿಶೂರ್​, ಅಲುವ, ಎರ್ನಾಕುಲಂ ಟೌನ್​, ಎಟ್ಟುಮನೂರ್​ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

Comments (0)

Your email address will not be published. Required fields are marked *

Back to top button