ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಸಮ್ಮೇಳನಕ್ಕೂ ಮುನ್ನವೇ ಹಲವು ವಿವಾದಗಳು ತಲೆದೋರಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನ ಎಣಿಕೆ ಆರಂಭವಾಗಿದೆ. ಡಿಸೆಂಬರ್ 20, 21 ಮತ್ತು 22 ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೆಳನ ನಡೆಯಲಿದೆ. ಶುಭ ಕಾರ್ಯಕ್ಕೆ ನೂರೆಂಟು ವಿಘ್ನ ಎಂಬಂತೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುನ್ನವೇ ಸಾಲು ಸಾಲು ವಿವಾದ ಸೃಷ್ಟಿಯಾಗಿದೆ. ಹೌದು, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ನಡೆಗೆ ಸಾಹಿತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವರ ಅಧ್ಯಕ್ಷತೆಯ ಸಭೆಯಲ್ಲೇ ಸಾಹಿತಿಗಳು ಗದ್ದಲ ಎಬ್ಬಿಸಿದ್ದಾರೆ. ಸಾಹಿತ್ಯ ಪರಿಷತ್ ಹಾಗೂ ಸಾಹಿತಿಗಳ ನಡುವೆ ಭಿನ್ನಾಭಿಪ್ರಾಯ.