ಬೆಂಗಳೂರು: ರಾಜ್ಯದಾದ್ಯಂತ ಲೋಕಾಯುಕ್ತ ಮತ್ತೆ ಭ್ರಷ್ಟರ ಬೇಟೆ ಚುರುಕುಗೊಳಿಸಿದೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂ.ಸಿ.ಕೃಷ್ಣವೇಣಿ ಮನೆ ಮೇಲೆ ದಾಳಿ ನಡೆದಿದೆ.

ಬೆಂಗಳೂರಿನಲ್ಲಿ ಟೌನ್ ಮತ್ತು ಕಂಟ್ರಿ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೂ ರೇಡ್ ನಡೆದಿದೆ. ಕಾವೇರಿ ನೀರಾವರಿ ನಿಗಮ‌ ಎಂಡಿ ಮಹೇಶ್ ಹಾಗೂ ಅವರ ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆ ಮೇಲೆ ದಾಳಿ ನಡೆದಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯಾದ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣವೇಣಿ ಅವರು 2 ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದಾರೆ. ಈ ಹಿಂದೆ ಕೃಷ್ಣವೇಣಿ ಚಿಕ್ಕಬಳ್ಳಾಪುರದಲ್ಲಿ ಗಣಿ‌ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಮೂರು ವಾಹನಗಳಲ್ಲಿ ಬಂದ ಅಧಿಕಾರಿಗಳಿಂದ ದಾಳಿ:
ಮಂಗಳೂರಿನ ವೇಲೆನ್ಸಿಯಾ ಬಳಿಯ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ಮೆಂಟ್ಗೆ ಬೆಳ್ಳಂಬೆಳಗ್ಗೆ ಮೂರು ವಾಹನಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಕರ್ನಾಟಕದ ಒಟ್ಟು ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಅವರಿಗೆ ಸೇರಿದ ಬೆಂಗಳೂರು ಮತ್ತು ಮೈಸೂರಿನ ಮನೆಗಳು, ಮಹೇಶ್ ಅವರ ಮಾವ ಕೃಷ್ಣಪ್ಪ ಅವರ ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಗಳ್ಳಿ ಗ್ರಾಮದಲ್ಲಿ ಇರುವ ಮನೆ ಸೇರಿದಂತೆ ಏಳು ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ.

By Veeresh

Leave a Reply

Your email address will not be published. Required fields are marked *

Verified by MonsterInsights